ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಜತೆ ಕಾಶಿ ಮಠಾಧಿಪತಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಜತೆ ಕಾಶಿ ಮಠಾಧಿಪತಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ

ಶ್ರೀನಗರ(reporterkarnataka.com): ವಾರಣಾಸಿಯ ಶ್ರೀ ಕಾಶಿ ಮಠ ಸಂಸ್ಥಾನದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಇಲ್ಲಿನ ರಾಜಭವನದಲ್ಲಿ ಭೇಟಿ ಮಾಡಿದರು.

ಸ್ವಾಮೀಜಿ ಅವರು ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ 250 ನಿರ್ಗತಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ನೆರವು ನೀಡುವ ಜೊತೆಗೆ ಅವರಿಗೆ ಇತರ ಸಹಾಯವನ್ನು ನೀಡುವ ಸಂಸ್ಥೆಯ ಯೋಜನೆಗಳ ಬಗ್ಗೆ ಚರ್ಚಿಸಿದರು. ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರು ಸ್ವಾಮೀಜಿ ಜತೆ ಸಂವಾದ ನಡೆಸಿದಾಗ ಸಮಾಜಕ್ಕೆ ಅವರ ಗಮನಾರ್ಹ ಕೊಡುಗೆಗಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.